ಕಾರ್ಕಳ : ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ ಶ್ರೀ ದುರ್ಗಾ ದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಟಪ್ಪಾಲು ಕಟ್ಟೆ ಇಲ್ಲಿನ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಸಂತೋಷ್ ರಾವ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಕಮಲಾಕ್ಷ ನಾಯಕ್, ಸಂಘದ ನಿರ್ದೇಶಕ ತ್ರಿವಿಕ್ರಮಕಿಣಿ, ಶಾಲಾ ಮುಖ್ಯ ಶಿಕ್ಷಕಿ ಸುಜಾತ ಎಸ್. ರಾಜ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಶ್ರೀ ಹಾಗೂ ಸಿಬ್ಬಂದಿ ನಿರೀಕ್ಷಾ ಇವರು ಉಪಸ್ಥಿತರಿದ್ದರು.
ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ – ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ



















