ಕಾರ್ಕಳ : ಜೋಡುರಸ್ತೆಯ ಸಹಕಾರ ಸಿಂದೂರದ ಪ್ರಥಮ ಮಹಡಿಯಲ್ಲಿ ನಿರ್ಮಾಣಗೊಂಡಿರುವ ಭಾರತ್ ಸಿನಿಮಾಸ್‌ನಲ್ಲಿ ಇಂದಿನಿಂದ (ಜೂ. 11)ರಿಂದ ಚಿತ್ರ ಪ್ರದರ್ಶನಗೊಳ್ಳಲಿದೆ. ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಗಳಿಸಿ ನಾಡಿನಾದ್ಯಂತ ಯಶಸ್ವಿಯಾಗಿ ಓಡುತ್ತಿರುವ “ಗಜಾನನ ಕ್ರಿಕೆಟರ್ಸ್” ತುಳು ಸಿನೆಮಾವೂ ಪ್ರದರ್ಶನಗೊಳ್ಳುತ್ತಿದೆ. ಇಂದು ಚಿತ್ರ ತಂಡವೂ ಕಾರ್ಕಳಕ್ಕೆ ಆಗಮಿಸುತ್ತಿದ್ದು, ಪ್ರೇಕ್ಷಕರು ಅವರೊಂದಿಗೆ ಚಿತ್ರ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1, ಸಂಜೆ 4 ಹಾಗೂ 7 ಘಂಟೆಗೆ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಕಾರ್ಕಳ ಹಾಗೂ ಮೂಡುಬಿದಿರೆ ಭಾಗದ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತುಳು ಚಿತ್ರವನ್ನು ಪ್ರೋತ್ಸಾಹಿಸುವಂತೆ ಚಿತ್ರತಂಡ ವಿನಂತಿಸಿದೆ.
ಕಾರ್ಕಳ, ಹೆಬ್ರಿ, ಮೂಡುಬಿದಿರೆ ಭಾಗದ ಜನತೆಗೆ ಅತ್ಯುತ್ತಮ ವ್ಯವಸ್ಥೆಯೊಂದಿಗೆ ಮನೋರಂಜನೆ ಒದಗಿಸಿಕೊಡಬೇಕೆಂಬ ನಿಟ್ಟಿನಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಅದರಲ್ಲಿ ಮೂರು ಸ್ಕ್ರೀನ್ ತೆರೆದಿತ್ತು. ಎ. 26ರಂದು ಕಟ್ಟಡ ಲೋಕಾರ್ಪಣೆಗೊಂಡಿದ್ದು, ಇದೀಗ ಚೊಚ್ಚಲ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ. ಗಜನಾನ ಕ್ರಿಕೆಟರ್ಸ್ ಅಲ್ಲದೇ ಕಜ್ಜ, ಶ್ರೀಕೃಷ್ಣವತಾರಂ ಚಿತ್ರವೂ ಪ್ರದರ್ಶನಗೊಳ್ಳುತ್ತಿದೆ.
























