ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಸಹಿತ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ, ಮನ್ಸೂರ್ ಆಲಿ ಖಾನ್ ಹಾಗೂ ಬಿಜೆಪಿಯ ಎಂ.ನಾಗರಾಜ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ.
























