ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್‌

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ ನೀಡಿದ್ದಾರೆ.
ವಿಜಯ್‌ ಅವರಿಗೆ ಹೂಗುಚ್ಛ ನೀಡಿ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು.
ಶಲ್ಯ ಧರಿಸಿ ಆಗಮಿಸುವ ಮೂಲಕ ಸಿಎಂ ವಿಜಯ್‌ ದೇವಸ್ಥಾನದ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್‌ ಸಂಕಲ್ಪ ಪೂಜೆ ಮಾಡಿದರು.
ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಎಂದು ಟ್ರಸ್ಟ್ ಅಧ್ಯಕ್ಷ ಬಾಬು ಹೆಗಡೆ ತಿಳಿಸಿದ್ದಾರೆ. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು.

































































error: Content is protected !!
Scroll to Top