ಕಾರ್ಕಳ : ಕಲ್ಲಗುಪ್ಪೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ. 10ರಂದು ದಾನಿಗಳಿಂದ ನೋಟ್ಸ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ದಾನಿಗಳಾದ ಸುಬ್ಬುಲಕ್ಷ್ಮಿ, ಸೆಲ್ವರಾಜ್, ಭಾನುಪ್ರಿಯ ಸ್ನೇಹ, ಬಾಲರಾಜ್ ನೀಡಿರುವ ನೋಟ್ಸ್ ಪುಸ್ತಕಗಳನ್ನು ವಿತರಿಸಿದರು.
ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಗಣೇಶ ಸಾಲಿಯನ್, ಉಪಾಧ್ಯಕ್ಷೆ ದೀಪ್ತಿ ದಿನೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಶಾಲಾ ಪೋಷಕ ದಾನಿಗಳಾದ ನಿವೃತ್ತ ಇಸ್ರೋ ವಿಜ್ಞಾನಿ ಜನಾರ್ಧನ್ ಇಡ್ಯಾ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಮನೋಹರ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಹ ಶಿಕ್ಷಕಿ ಸುನಂದಾ ಕಾರ್ಯಕ್ರಮ ನಿರೂಪಿಸಿದರು.
ಕಲ್ಲಗುಪ್ಪೆ ಶಾಲೆಯಲ್ಲಿ ನೋಟ್ಸ್ ಪುಸ್ತಕ ವಿತರಣಾ





















