ಕಾರ್ಕಳ : ನಕ್ರೆ ಸರಕಾರಿ ಪ್ರೌಢಶಾಲೆಯಲ್ಲಿ 2025-2026 ಶೈಕ್ಷಣಿಕ ಸಾಲಿನ ಎಸ್ಸೆಸೆಲ್ಸಿ ಸಾಧಕ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 12ರಂದು ನಡೆಯಿತು. ಶಾಲಾಮೇಲುಸ್ತುವಾರಿ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯಿಂದ ವರ್ಗಾವಣೆಗೊಂಡ ವಿಜ್ಞಾನ ಶಿಕ್ಷಕ ಪ್ರಸನ್ನ ಶೆಟ್ಟಿ ಅವರನ್ನು ಗೌರವಿಸಲಾಯಿತು. ಶಿಕ್ಷಕ ಶಂಕರ್ ಪೂಜಾರಿ, ಅಂತೋನಿ ಡಿಸೋಜ, ಶಶಿಮಣಿ, ಶಶಿಕಲಾ, ಉಷಾ, ಯೋಗ ಗುರು ಅಶೋಕ್, ನಿವೃತ್ತ ಶಿಕ್ಷಕಿ ಬೆನೆಡಿಕ್ಟ್ ಪಿಂಟೊ, ಹಿರಿಯರಾದ ಜಯಶಂಕರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಆಂಗ್ಲ ಭಾಷಾ ಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು. ಸಮಾಜವಿಜ್ಞಾನ ಶಿಕ್ಷಕ ಮಂಜುನಾಥ್ ಪ್ರಭು ವಂದಿಸಿದರು.
ನಕ್ರೆ ಸರಕಾರಿ ಪ್ರೌಢಶಾಲೆಯಲ್ಲಿ – ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ























