ಜೂ. 16 : ಸಾಣೂರು ರಾಜೇಶ್ವರಿ ನ್ಯಾಷನಲ್‌ ಸ್ಕೂಲ್‌ – ಪ್ರಾರಂಭೋತ್ಸವ

ಕಾರ್ಕಳ : ಸಾಣೂರು ರಾಜೇಶ್ವರಿ ನ್ಯಾಷನಲ್‌ ಸ್ಕೂಲ್‌ ಪಿಯು ಕಾಲೇಜಿನಲ್ಲಿ 2026-27 ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಡಾ. ಜೀವರಾಜ್‌ ಆಳ್ವ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭ ಜೂ. 16ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಕಾರ್ಕಳ ಜೈನಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಅಖಿಲ ಕರ್ನಾಟಕ ಮಕ್ಕಳ ಕೂಟದ ಅಧ್ಯಕ್ಷ ಕೆ. ಮೋಹನ್‌ ದೇವ್‌ ಆಳ್ವ, ಕೊರಂಗ್ರಪಾಡಿ ವಿದ್ವಾನ್‌ ಕುಮಾರಗುರು ತಂತ್ರಿ, ಅಜೆಕಾರು ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಹಾಗೂ ಬಡಗಬೆಟ್ಟು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿದ್ದಾರೆ.





















































































































































error: Content is protected !!
Scroll to Top