ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ನಿಜವಾದ ಫಲಾನುಭವಿಗಳನ್ನು ಗುರುತಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಮೃತಪಟ್ಟವರ ಹೆಸರಿನಲ್ಲಿ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬುದು ವಿರೋಧ ಪಕ್ಷಗಳು ನಡೆಸುತ್ತಿರುವ ಸುಳ್ಳು ಪ್ರಚಾರ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸುವ ಅಥವಾ ಸ್ಥಗಿತಗೊಳಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ರಾಜ್ಯದಲ್ಲಿ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಮಹಾರಾಷ್ಟ್ರ, ಮಧ್ಯಪ್ರದೇಶ, ತಮಿಳುನಾಡು ಹಾಗೂ ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಕರ್ನಾಟಕದ ಮಾದರಿಯನ್ನು ಅನುಸರಿಸುತ್ತಿವೆ ಎಂದು ಅವರು ಹೇಳಿದರು.







































error: Content is protected !!
Scroll to Top