ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವವಿಭಾಗ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ಜೂ. 13ರಂದು ನಡೆಯಿತು.
ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವವಿಭಾಗ)ಉಪನಿರ್ದೇಶಕ ಮಾರುತಿ ಕಾರ್ಯಕ್ರಮ ಉದ್ಘಾಟಿಸಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಶ್ನೆ ಪತ್ರಿಕೆ ನೀಲನಕಾಶೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆರಚನಾ ಸಮಿತಿಯ ಸದಸ್ಯರಾಗಿದ್ದ ಬೆಂಗಳೂರು ಕೆಎಸ್ ಇ.ಎ.ಬಿ. ಕಂಪ್ಯೂಟರ್ ಸೆಲ್ ಅಸಿಸ್ಟೆಂಟ್ ಡೈರೆಕ್ಟರ್ ಗಿರೀಶ ಸಿ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವಿವಿಧ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸುಮಾರು 45 ರಸಾಯನಶಾಸ್ತ್ರ ವಿಭಾದ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ. ದಯಾನಂದ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷೆ ರೂಪ ಎಲ್. ಭಟ್, ಆದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂಜೀವ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಓ ದಿನೇಶ್ ಎಂ. ಕೊಡವೂರು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಪ್ರಾಂಶುಪಾಲ ಗಣೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಸುರತ್ ಕುಮಾರ್ ಸ್ವಾಗತಿಸಿ, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಡಾ. ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

























