ದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಜೂ. 22 ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಅಪ್ಲಿಕೇಶನ್ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಕೇಂದ್ರ ಸರ್ಕಾರದ ಈ ಆದೇಶ ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
ದೆಹಲಿ ಹೈಕೋರ್ಟ್‌ಗೆ ಟೆಲಿಗ್ರಾಮ್ ಅರ್ಜಿ ಸಲ್ಲಿಸಿದ್ದು, ಆದೇಶವನ್ನು ಮರುಪರಿಶೀಲಿಸುವಂತೆ ಕೋರಿದೆ. ಇಂದು ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.
ಒಂದು ದಿನದ ಹಿಂದೆಯಷ್ಟೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಆದೇಶ ಹೊರಡಿಸಿತು. ಈ ನಿರ್ಧಾರದ ಜೊತೆ ಜೂನ್ 30ರ ವರೆಗೆ ಹಳೆಯ ಸಂದೇಶಗಳನ್ನು ಎಡಿಟ್ ಮಾಡುವ ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸಲಾಗಿದೆ. ಜೂನ್ 21 ರಂದು ನೀಟ್ ಮರುಪರೀಕ್ಷೆ ನಡೆಯಲಿರುವ ಹಿನ್ನೆಲೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳನ್ನ ತಡೆಯಲು ಕೇಂದ್ರ ಈ ಕಠಿಣ ಕ್ರಮ ಕೈಗೊಂಡಿದೆ.



















