ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ !

ಕಾರ್ಕಳ : ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆಯಲ್ಲಿ ಬಾಡಿಗೆ ಮನೆಯಲ್ಲಿ ಜೂ.20ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗು ದೃವಿಯೊಂದಿಗೆ ವಾಸವಾಗಿದ್ದರು. ಆಲಂಕಾರು ಪೇಟೆಯಲ್ಲಿ ಹೊಟೇಲ್‌ ನಡೆಸುತ್ತಿದ್ದ ದಂಪತಿ ಒಂದು ತಿಂಗಳ ಹಿಂದೆ ಹೋಟೆಲ್ ಬಿಟ್ಟು ತೆರಳಿದ್ದರು. ಜೂ.19ರ ಸಂಜೆ ಆಲಂಕಾರು ಕಜೆಯ ಬಾಡಿಗೆ ಮನೆಗೆ ಪುನಃ ಬಂದಿದ್ದು, ಜೂ.20ರಂದು ಘಟನೆ ನಡೆದಿದೆ. ಮನೆಯ ಒಳಗಿನ ಚಿಲಕ ಹಾಕಲಾಗಿತ್ತು. ಎರಡು ವರ್ಷದ ಮಗು ಅತ್ತು ಮತ್ತೆ ನಿದ್ದೆಗೆ ಜಾರಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

































error: Content is protected !!
Scroll to Top