ಕರಾವಳಿ & ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

ಕಾರ್ಕಳ : ಕರಾವಳಿ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯನ್ನು ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಕರಾವಳಿ ಪ್ರವಾಸೋದ್ಯಮ ಸಭೆ ನಡೆಸಲಾಯಿತು. ಸಭೆಯಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ಕರಾವಳಿ ಭಾಗದ ಜನಪದ ಕಲೆ, ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅದರ ಜೊತೆಗೆ ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿದರೆ ಕರ್ನಾಟಕ, ಕೇರಳ ಹಾಗೂ ಗೋವಾ ಚಿತ್ರರಂಗಗಳಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಹೋಂಸ್ಟೇ ಉದ್ಯಮಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ವಿಷಯಗಳ ಚರ್ಚೆ ನಡೆದಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಹೋಂಸ್ಟೇ ಉದ್ಯಮ ಪ್ರವಾಸೋದ್ಯಮದ ಪ್ರಮುಖ ಆಧಾರವಾಗಿದ್ದರೂ, ಹಲವು ಕಠಿಣ ನಿಯಮಗಳಿಂದ ಉದ್ಯಮಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಮಸ್ಯೆಗಳ ಕುರಿತು 15 ರಿಂದ 20 ದಿನಗಳೊಳಗೆ ಸಮಗ್ರ ವರದಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯ ಸರ್ಕಾರ ಅನುಮೋದಿಸಿರುವ 45 ಪ್ರವಾಸೋದ್ಯಮ ಯೋಜನೆಗಳ ಮೂಲಕ ಸುಮಾರು 4500 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ. ಆದರೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.





































































error: Content is protected !!
Scroll to Top