ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ

ಕಾರ್ಕಳ : ಆರೋಗ್ಯಕರ ಜೀವನಕ್ಕೆ ಯೋಗವೇ ಸರಳ ಮತ್ತು ಪರಿಣಾಮಕಾರಿ ಮಾರ್ಗ. ಬೆಳಗ್ಗಿನ ಓದು ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಿದರೆ, ಯೋಗವು ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯ ವೃದ್ಧಿಸುವುದು ಎಂದು ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯ ವಿನಾಯಕ ಕುಡ್ವ ಹೇಳಿದರು.

ಅವರು ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮಾತನಾಡಿದರು. ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್‌ ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣದ ಜೊತೆಗೆ ಯೋಗಕ್ಕೂ ಮಹತ್ವ ನೀಡಬೇಕು ಎಂದರು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ರಾಜ್ಯಮಟ್ಟದ ಯೋಗಪಟು ನಿಖಿಲ್ ಪೂಜಾರಿ ಯೋಗ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದರು. ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳು ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ವೇದಿಕೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ನಾಯ್ಕ್ ಉಪಸ್ಥಿತರಿದ್ದರು. ಶಿಕ್ಷಕಿ ರೀನಾರವರು ಕಾರ್ಯಕ್ರಮ ನಿರೂಪಿಸಿದರು.





























error: Content is protected !!
Scroll to Top