ಬೆಂಗಳೂರು : ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ, ಅಧಿಕಾರ ಹಸ್ತಾಂತರಿಸಿ ಅವರು ಮಾತಾಡಿದರು. ಈ ವೇಳೆ ವಿದ್ಯಾರ್ಥಿ ಚುನಾವಣೆ ಆರಂಭಿಸುವ ಬಗ್ಗೆ ಮಾಹಿತಿ ನೀಡಿದ ಅವರು, ರಾಹುಲ್ ಗಾಂಧಿಯವರ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸಲು ಕಾಲೇಜುಗಳಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು, ಇದೇ ವರ್ಷದಿಂದ ವಿದ್ಯಾರ್ಥಿ ಚುನಾವಣೆ ನಡೆಸಲಾಗುವುದು. ಆ ಮೂಲಕ ಪಂಚಾಯಿತಿಗಳಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ತಯಾರು ಮಾಡಲಾಗುವುದು. ಅಲ್ಲದೇ ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ತಪ್ಪಿಸುವುದಿಲ್ಲ ಎಂದು ಭರವಸೆ ನೀಡಿದರು.











