ಕಾರ್ಕಳ ಮಹಿಳಾ ಮೋರ್ಚಾ – ಆರೋಗ್ಯಪೂರ್ಣ ಆಹಾರ ಪದ್ಧತಿ ಕಾರ್ಯಾಗಾರ

ಕಾರ್ಕಳ : ಆಧುನಿಕ ಜೀವನ ಶೈಲಿಯಿಂದ ಮತ್ತು ಆಹಾರದ ವ್ಯವಸ್ಥೆಯಿಂದ ಹದಿ ಹರೆಯದ ಮಕ್ಕಳಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾರ್ಕಳ ಮಹಿಳಾ ಮೋರ್ಚಾದ ವತಿಯಿಂದ ಜೂ. 23ರಂದು ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಪೂರ್ಣ ಆಹಾರ ಪದ್ಧತಿ ವಿಷಯವಾಗಿ ಕಾರ್ಯಗಾರ ನಡೆಯಿತು.

ಸಮುದಾಯ ಕೇಂದ್ರದ ಆರೋಗ್ಯಾಧಿಕಾರಿ ತೇಜಸ್ವಿನಿ ಅವರು ಸಾಂಪ್ರದಾಯಿಕ ಮತ್ತು ಆಧುನಿಕ ಆಹಾರ ಪದ್ಧತಿಯ ಮಾಹಿತಿ ನೀಡಿದರು.
ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಸೊಪ್ಪು ತರಕಾರಿ, ಮೊಳಕೆ ಕಾಳುಗಳಂತಹ ಆಹಾರಗಳ ಮಿತ ಬಳಕೆಯಿಂದ ಇಂಧನ ಉಳಿತಾಯ ಮತ್ತು ಆರೋಗ್ಯ ವರ್ಧನೆ ಮಾಡಿಕೊಳ್ಳಬಹುದಾಗಿದೆ ಎಂದ ಅವರು ಪ್ರಧಾನಿಯವರ ಆತ್ಮ ನಿರ್ಭರ ಪರಿಕಲ್ಪನೆಯಲ್ಲೂ ಸ್ಥಳೀಯ ಆಹಾರ ಪದಾರ್ಥಗಳ ಬಳಕೆಯ ಬಗ್ಗೆ ಉಲ್ಲೇಖವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸೀತಾರಾಮ್ ಭಟ್ ಮಾತನಾಡಿ, ಉತ್ತಮ ಆಹಾರ ಪದ್ಧತಿ ಅನುಸರಿಸುವ ಮೂಲಕ ಆರೋಗ್ಯವಂತ ಜೀವನ ನಡೆಸುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರವೀಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ತೇಜಸ್ವಿನಿಯವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಶೋಭಾ ಭಾಸ್ಕರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಉಷಾ ಜಯಪ್ರಕಾಶ್, ಲಕ್ಷ್ಮೀ ಮಂಜುನಾಥ್, ಕಾರ್ಯದರ್ಶಿ ಜ್ಯೋತಿ ರಮೇಶ್, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನುತಾ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕ ರತ್ನಾಕರ ಪೂಜಾರಿ ಸ್ವಾಗತಿಸಿ, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಮಾ ರವಿಕಾಂತ್ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷೆ ವಿನಯ ಡಿ. ಬಂಗೇರ ವಂದಿಸಿದರು.































error: Content is protected !!
Scroll to Top