ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ – ವಿವಿಧ ಕ್ಲಬ್‌ಗಳ ಉದ್ಘಾಟನೆ

ಕಾರ್ಕಳ : ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಇಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿವಿಧ ಕ್ಲಬ್‌ಗಳ ಉದ್ಘಾಟನಾ ಸಮಾರಂಭ ಜೂ. 23ರಂದು ನಡೆಯಿತು.
ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವ ವಿವಿಧ ಕ್ಲಬ್‌ಗಳ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಸಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಕ್ಲಬ್‌ಗಳು ಪ್ರಮುಖ ವೇದಿಕೆಯಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ದೊರೆಯುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಇತರರಿಗೆ ಸ್ಫೂರ್ತಿವಾಗುವಂತಹ ಮನೋಭಾವವನ್ನು ಬೆಳೆಸಿಕೊಳ್ಳಿ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ವಿದ್ಯಾರ್ಥಿಗಳಿಗೆ ನಾಲ್ಕು ಗೋಡೆಗಳ ಶಿಕ್ಷಣ ಮಾತ್ರವಲ್ಲದೆ ಅದನ್ನು ಮೀರಿದ ಅನುಭವಾಧಾರಿತ ಶಿಕ್ಷಣವೂ ದೊರೆಯಬೇಕು. ಈ ನಿಟ್ಟಿನಲ್ಲಿ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದ ಅವರು ಕಾರ್ಯಕ್ರಮಗಳು ಕೇವಲ ಆಚರಣೆಗೆ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು. ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಆದರ್ಶ ಪ್ರಜೆಗಳಾಗಬೇಕು ಎಂದು ಕಿವಿಮಾತು ಹೇಳಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಪ್ರತಿಭೆ, ನಾಯಕತ್ವ ಗುಣ, ಸೃಜನಶೀಲತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಯೋಗ ಕ್ಲಬ್, ಪರಿಸರ ಕ್ಲಬ್, ಭಾಷಾ ಮತ್ತು ಸಾಹಿತ್ಯ ಕ್ಲಬ್, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಲಬ್, ಸಾಂಸ್ಕೃತಿಕ ಕ್ಲಬ್, ಕ್ರೀಡಾ ಕ್ಲಬ್ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಕ್ಲಬ್‌ಗಳು ಕಾರ್ಯನಿರ್ವಹಿಸಲಿವೆ ಎಂದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ರಶ್ಮಿ ರಾಜ್, ಮುಖ್ಯ ಶಿಕ್ಷಕ ಪ್ರಣವ್ ಭಟ್, ಕಾರ್ಯನಿರ್ವಹಣಾ ಅಧಿಕಾರಿ ದೀಪು ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ಜೀವನ್ ಪಿಂಟೋ, ವಿವಿಧ ಕ್ಲಬ್ ಗಳ ಸಂಯೋಜನಾಧಿಕಾರಿ ಧನ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿನಿಯರಾದ ಆರುಷಿ ಪ್ರಭು ಸ್ವಾಗತಿಸಿದರು. ದೇಶ್ನ ಕಾರ್ಯಕ್ರಮ ನಿರೂಪಿಸಿದರು. ಡೆಲಿಷ ರೀಷಲ್ ಕ್ಯಾಸ್ಟಲಿನೊ ವಂದಿಸಿದರು.































error: Content is protected !!
Scroll to Top