ಕಾರ್ಕಳ : ಎಸ್‌ವಿಟಿ ವನಿತಾ ಪದವಿ ಪೂರ್ವ ಕಾಲೇಜಿನ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಜೂ. 24ರಂದು ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿ ನೀಡಿದರು.
ಯುವ ಜನತೆಯಲ್ಲಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಕಾನೂನಿನ ಅರಿವನ್ನು ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುತ್ತಿರಬೇಕು. ಮಾದಕ ವಸ್ತುಗಳಿಗೆ ಬಲಿಯಾಗುವುದು ಎಷ್ಟು ಹಾನಿಕಾರವೋ ಮಾದಕ ವ್ಯಸನಿಗಳ ಸಂಪರ್ಕದಲ್ಲಿರುವುದು ಕೂಡ ಅಷ್ಟೇ ಹಾನಿಕಾರಕ. ಆದ್ದರಿಂದ ವ್ಯಸನಗಳಿಂದ ದೂರವಿರಿ, ಜೀವನವನ್ನು ಪ್ರೀತಿಸಿ ಮತ್ತು ಕಾನೂನನ್ನು ಗೌರವಿಸಿ ಉತ್ತಮ ಪ್ರಜೆಗಳಾಗಿ ಜೀವಿಸಿ ಎಂದ ಅವರು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ನೇಮಿರಾಜ ಶೆಟ್ಟಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಯೋಗೇಂದ್ರ ನಾಯಕ್, ಇಂಟರ್ಯಾಕ್ಟ್ ಕ್ಲಬ್‌ನ ಅಧ್ಯಕ್ಷೆ ವಿಶ್ವರಿ ಉಪಸ್ಥಿತರಿದ್ದರು. ಇಂಟರ್ಯಾಕ್ಟ್ ಕ್ಲಬ್‌ನ ಸಂಯೋಜಕ ದೇವದಾಸ್ ಕೆರೆಮನೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅರ್ಪಿತ ವಂದಿಸಿದರು.

























