ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಪಿ. ರವಿ ಆಚಾರ್ಯ

ಕಾರ್ಕಳ : ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಪಿ. ರವಿ ಆಚಾರ್ಯ ಪೆರ್ವಾಜೆ, ಜೊತೆ ಮೊಕ್ತೇಸರರಾಗಿ ನಿಟ್ಟೆ ಸುರೇಶ್‌ ಆಚಾರ್ಯ ಮತ್ತು ಪಿ. ವಸಂತ್‌ ಆಚಾರ್ಯ ಆಯ್ಕೆಯಾಗಿದ್ದಾರೆ. ಜೂ.28ರಂದು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಅತ್ತೂರು ಶಿಲ್ಪಿ ರಾಮಚಂದ್ರ ಆಚಾರ್ಯ ವಹಿಸಿದ್ದರು. ಅತಿಥಿಯಾಗಿ ಕುದುರೆಮುಖ ವನ್ಯಜೀವಿ ಅಭಯಾರಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್‌. ಸತೀಶ್‌ ಭಾಗವಹಿಸಿದ್ದರು. ಕ್ಷೇತ್ರದ ಪ್ರಧಾನ ಅರ್ಚಕ ಪುರೋಹಿತ್‌ ವಿಠಲ್‌ ಆಚಾರ್ಯ ಪ್ರಾರ್ಥಿಸಿ, ನಿಕಟ ಪೂರ್ವ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಸ್ವಾಗತಿಸಿದರು. ಕಾರ್ಕಳ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಎಂ. ರಮೇಶ್‌ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಜು. 9ರಂದು ದೇವಸ್ಥಾನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ.















































































































































error: Content is protected !!
Scroll to Top