ಚಿಕಿತ್ಸೆಗಾಗಿ ಆಸ್ಪತ್ರೆ ಸಾಗಿಸುವಾಗ ಮೃತ್ಯು
ಹೆಬ್ರಿ : ಹೆಬ್ರಿ ಪೊಲೀಸ್ ಠಾಣೆಗೆ ಅರ್ಜಿ ವಿಚಾರಣೆಗಾಗಿ ಬಂದ ಮಹಿಳೆಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಜೂ. 28ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶಿವಪುರ ಗ್ರಾಮದ ಸುಶೀಲಾ (74) ಎಂದು ಗುರುತಿಸಲಾಗಿದೆ. ಇವರು ತನ್ನ ಇಬ್ಬರು ಮಕ್ಕಳು ಹಾಗೂ ಸೊಸೆಯೊಂದಿಗೆ ಅರ್ಜಿ ವಿಚಾರಣೆ ಸಲುವಾಗಿ ಹೆಬ್ರಿ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಚಿಕಿತ್ಸೆಗಾಗಿ ಹೆಬ್ರಿ ಹೆಲ್ತ್ ಕೇರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಸುಶೀಲಾರವರನ್ನು ಪರೀಕ್ಷಿಸಿ ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇವರ ಮರಣಕ್ಕೆ ಲಕ್ಷ್ಮೀ ಹಾಗೂ ಪ್ರತಿಮಾ ಅವರ ಕಿರುಕುಳ ಕಾರಣ ಆಗಿರುವ ಬಗ್ಗೆ ಸಂಶಯವಿರುವುದಾಗಿ ಮೃತರ ಪುತ್ರ ರಮೇಶ್ ನಾಯ್ಕ ನೀಡಿದ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











