ಅಮೃತಭಾರತಿ : ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ – ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ

ಹೆಬ್ರಿ : ಪಿ.ಆರ್.ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೂ. 30ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ -2026 ಕಾರ್ಯಕ್ರಮ ನಡೆಯಿತು. ಹೆಬ್ರಿ ಆರಕ್ಷಕ ಠಾಣೆಯ ಪಿ.ಎಸ್.ಐ. ಚಂದ್ರ ಕೆ. ಅವರ ಮಾದಕ ವಸ್ತುಗಳ ದುಷ್ಪರಿಣಾಮ, ಕಾನೂನು ಅರಿವು ಮತ್ತು ವಿದ್ಯಾರ್ಥಿಗಳ ಜವಾಬ್ದಾರಿಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಹೆಬ್ರಿ ಆರಕ್ಷಕ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜ್ ಕುಮಾರ್, ಮುಖ್ಯ‌ ಶಿಕ್ಷಕಿ ಅಪರ್ಣಾ ಆಚಾರ್, ಶಕುಂತಲಾ ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕಿಯರಾದ ಸೌಪರ್ಣಿಕಾ ಜೋಷಿ ಸ್ವಾಗತಿಸಿ, ನವ್ಯಾ ಪೈ ವಂದಿಸಿದರು.































error: Content is protected !!
Scroll to Top