ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ – ಹದಿಹರೆಯದ ಕುರಿತು ಜಾಗೃತಿ ಕಾರ್ಯಕ್ರಮ

ಕಾರ್ಕಳ : ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಜು.1ರಂದು ಆರೋಗ್ಯಕರ ಹದಿಹರೆಯಕ್ಕಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀವಿದ್ಯಾ ಮಾತನಾಡಿ, ಕಿಶೋರಾವಸ್ಥೆಯು ಜೀವನದ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳ ಬಗ್ಗೆ ಸರಿಯಾದ ಅರಿವು ಹೊಂದುವುದು ಅಗತ್ಯ ಎಂದ ಅವರು ಕಿಶೋರಾವಸ್ಥೆಯಲ್ಲಿ ಉಂಟಾಗುವ ದೈಹಿಕ ಬೆಳವಣಿಗೆ, ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಮಾನಸಿಕ ಆರೋಗ್ಯ, ಉತ್ತಮ ಅಭ್ಯಾಸಗಳು, ಸುರಕ್ಷತೆ ಹಾಗೂ ಆತ್ಮವಿಶ್ವಾಸದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪ ಪ್ರಾಂಶುಪಾಲೆ ವಾಣಿ ಕೆ. ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಪೂರ್ವಿ ಪ್ರಾರ್ಥಿಸಿ, ಶ್ರೀಯಾ ಕಾರ್ಯಕ್ರಮ ನಿರೂಪಿಸಿದರು.





























































































































error: Content is protected !!
Scroll to Top