ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

ಜುಲೈ 20ರಿಂದ 27ರೊಳಗೆ ಆರಂಭವಾಗುವ ನಿರೀಕ್ಷೆಯಿರುವ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಪ್ರಸ್ತಾವಿತ ತಿದ್ದುಪಡಿಯ ಪ್ರಕಾರ, ಪ್ರಧಾನಿ ಅಥವಾ ಮುಖ್ಯಮಂತ್ರಿಯೊಬ್ಬರು ಜಾಮೀನು ಪಡೆಯದೆ 30 ದಿನಗಳಿಗಿಂತ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ ಅವರ ಹುದ್ದೆ ಸ್ವಯಂಚಾಲಿತವಾಗಿ ಖಾಲಿಯಾಗಲಿದೆ.

ಈ ಕ್ರಮದಿಂದ ಉನ್ನತ ಸಾಂವಿಧಾನಿಕ ಹುದ್ದೆಗಳಲ್ಲಿರುವವರ ಹೊಣೆಗಾರಿಕೆಯನ್ನು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕರ ವಿಶ್ವಾಸವನ್ನು ಬಲಪಡಿಸುವ ಉದ್ದೇಶವಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.

ಆದರೆ, ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಳ್ಳುವ ಮುನ್ನವೇ ವ್ಯಕ್ತಿಯನ್ನು ಅನರ್ಹಗೊಳಿಸುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಬಹುದು ಎಂದು ಅಭಿಪ್ರಾಯಪಟ್ಟಿವೆ.

ಅಲ್ಲದೆ ಅಪರಾಧ ಸಾಬೀತಾಗುವವರೆಗೆ ವ್ಯಕ್ತಿಯನ್ನು ನಿರಪರಾಧಿ ಎಂದು ಪರಿಗಣಿಸಬೇಕು” ಎಂಬ ಸಂವಿಧಾನಾತ್ಮಕ ತತ್ವಕ್ಕೆ ಈ ಮಸೂದೆ ವಿರುದ್ಧವಾಗಿದೆ ಎಂದು ಪ್ರತಿಪಕ್ಷಗಳು ವಾದಿಸಿವೆ.ಆಕ್ಷೇಪಣೆಗಳನ್ನು ತಳ್ಳಿ ಹಾಕಿದ್ದು, ದೇಶದ ಆಡಳಿತ ವ್ಯವಸ್ಥೆಯಲ್ಲಿ ಹೆಚ್ಚಿನ ಉತ್ತರದಾಯಿತ್ವ ತರಲು ಈ ಮಸೂದೆ ಅಗತ್ಯ ಎಂದು ಸಮರ್ಥಿಸಿದೆ.

ಮಸೂದೆಯನ್ನು ಶೀಘ್ರದಲ್ಲೇ ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಮುಂಬರುವ ಮುಂಗಾರು ಅಧಿವೇಶನದ ಪ್ರಮುಖ ಶಾಸನ ಕಾರ್ಯಸೂಚಿಯಲ್ಲಿ ಇದಕ್ಕೂ ಸ್ಥಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಅನರ್ಹಗೊಳಿಸುವ 130ನೇ ಸಂವಿಧಾನ ತಿದ್ದುಪಡಿ ಮಸೂದೆಯ ಜೊತೆಗೆ, ಮಹಿಳಾ ಮೀಸಲಾತಿ ಮಸೂದೆ ಸೇರಿದಂತೆ ಕೆಲವೇ ಪ್ರಮುಖ ಮಸೂದೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡುವ ಸಾಧ್ಯತೆ ಇದೆ.

ಸರ್ಕಾರ ಪ್ರಮುಖ ನೀತಿ ನಿರ್ಧಾರಗಳಿಗೆ ಸಂಬಂಧಿಸಿದ ಶಾಸನ ಕಾರ್ಯಸೂಚಿಯ ಮೇಲೆ ಹೆಚ್ಚು ಗಮನಹರಿಸಿದೆ ಎಂದು ಮೂಲಗಳು ತಿಳಿಸಿವೆ.

ಜೆಪಿಸಿ ಬಹಿಷ್ಕರಿಸಿದ ಪ್ರಮುಖ ಪ್ರತಿಪಕ್ಷಗಳು

ಈ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ (JPC)ಯನ್ನು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (TMC), ಸಮಾಜವಾದಿ ಪಕ್ಷ (SP), ಡಿಎಂಕೆ (DMK) ಹಾಗೂ ಎಡಪಕ್ಷಗಳು ಬಹಿಷ್ಕರಿಸಿವೆ.

ಆದರೆ, ಶರದ್ ಪವಾರ್ ಬಣದ ಎನ್‌ಸಿಪಿ (NCP), ಎಐಎಂಐಎಂ (AIMIM) ಹಾಗೂ ತಟಸ್ಥ ನಿಲುವು ಹೊಂದಿರುವ ಬಿಜು ಜನತಾ ದಳ (BJD), ವೈಎಸ್‌ಆರ್ ಕಾಂಗ್ರೆಸ್ (YSRCP) ಮತ್ತು ಶಿರೋಮಣಿ ಅಕಾಲಿ ದಳ (SAD) ಸೇರಿದಂತೆ ಕೆಲವು ಪಕ್ಷಗಳು ಜಂಟಿ ಸಂಸದೀಯ ಸಮಿತಿಯ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಿವೆ.































error: Content is protected !!
Scroll to Top