ಶಿರ್ವ : ಕಾರಿಗೆ ಡೀಸೆಲ್ ಹಾಕಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌

ಉಡುಪಿ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ
ಬಂಧಿಸಿದ್ದಾರೆ.

ಮಹಮ್ಮದ್ ರಿಯಾಜ್ (26), ಮಹಮ್ಮದ್ ಅಫ್ರಾಜ್ (23) ಹಾಗೂ ಆಶಿಲ್ (21) ಬಂಧಿತ ಆರೋಪಿಗಳು. ಈ ಮೂವರು ಕುರ್ಕಾಲು ಗ್ರಾಮದ ಸುಭಾಷ್ ನಗರದಲ್ಲಿರುವ ಪೆಟ್ರೋಲ್‌ ಬಂಕ್‌ನಲ್ಲಿ ಜೂ. 27ರ ರಾತ್ರಿ ಕಾರಿಗೆ 4,711.09 ರೂ. ಡೀಸೆಲ್‌ ತುಂಬಿಸಿಕೊಂಡಿದ್ದರು. ಬಳಿಕ ಹಣ ಪಾವತಿಸಲು ಕ್ಯೂಆರ್ ಕೋಡ್ ಕೇಳಿ ಅದನ್ನು ಸ್ಕ್ಯಾನ್ ಮಾಡಿ, ಬಿಲ್ ತರುವಂತೆ ಸಿಬ್ಬಂದಿಗೆ ತಿಳಿಸಿದ್ದರು. ಸಿಬ್ಬಂದಿ ಬಿಲ್ ತರಲು ಹೋದ ವೇಳೆ, ಹಣ ಪಾವತಿಸದೆ ಕಾರಿನಲ್ಲಿ ಪರಾರಿಯಾಗಿದ್ದರು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿರ್ವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ KA-14-MB-8452 ಸಂಖ್ಯೆಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಹಾಗೂ ಕಾಪು ವೃತ್ತ ಪೊಲೀಸ್ ವೃತ್ತ ನಿರೀಕ್ಷಕ ಅಝಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಶಿರ್ವ ಠಾಣೆಯ ಉಪ ನಿರೀಕ್ಷಕ ಮಂಜುನಾಥ ಮರಬದ, ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿ ಹರ್ಷ ಭಟ್, ಬಸವರಾಜ ಮತ್ತು ದರಿಯಪ್ಪ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.































error: Content is protected !!
Scroll to Top