ಕಾರ್ಕಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕ ಜುಗಾರಿ ಆಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜು. 2ರಂದು ಹೆಬ್ರಿಯಲ್ಲಿ ನಡೆದಿದೆ. ಹೆಬ್ರಿ ಗ್ರಾಮದ ವಿಜಯಲಕ್ಮೀ ಬಾರ್ ಎಂಡ್ ರೆಸ್ಟೋರೆಂಟ್ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಮಟ್ಕಾ ಜುಗಾರಿ ಆಟ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಬಂದ ಮೇರೆಗೆ ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಚಂದ್ರ ಎ. ಕೆ. ದಾಳಿ ಮಾಡಿ ಆರೋಪಿ ಉಡುಪಿ ಪುತ್ತೂರು ಗ್ರಾಮದ ಚೇತನ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು 1,670 ರೂ. ಹಾಗೂ ಆಟಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಜುಗಾರಿ ಅಡ್ಡೆಗೆ ದಾಳಿ – ಓರ್ವನ ಬಂಧನ
















