ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ ನಿಧನ

ಕಾರ್ಕಳ : ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ನೀರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ, ಉದ್ಯಮಿ ರಾಮಕೃಷ್ಣ ಶೆಟ್ಟಿ (70 ವ) ಅವರು ಜು. 9ರಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ರಾಮಕೃಷ್ಣ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ರಾಮಕೃಷ್ಣ ಅವರು ಮೈತ್ರಿ ಸೇವಾ ಸಂಘದ ಅಧ್ಯಕ್ಷರಾಗಿ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಅಂತಿಮ ಸಂಸ್ಕಾರ
ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಬೈಲೂರಿನ ಸ್ವಗೃಹದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಜೆ 5 ಗಂಟೆಗೆ ನೀರೆ ಬೊಟ್ಟ ಮನೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.





























































































































error: Content is protected !!
Scroll to Top