ಕಾರ್ಕಳ : ನಿಟ್ಟೆ ವಿದ್ಯಾಸಂಸ್ಥೆ ಹಾಗೂ ರೋಟರಿ ಕ್ಲಬ್ ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಸ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ರೋಟೆರಿಯನ್ ಮನೋಹರ ಶೆಟ್ಟಿ ಹಾಗೂ ರಾಘವೇಂದ್ರ ಕುಮಾರ್ ಅವರು ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕಗಳನ್ನು ವಿತರಿಸಿ, ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಯಶಸ್ವಿ ಜೀವನ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭ ಎಸ್.ಡಿ.ಎಂ.ಸಿ ಅಧ್ಯಕ್ಷರು, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು, ಮುಖ್ಯ ಶಿಕ್ಷಕರು, ಅಧ್ಯಾಪಕ ವೃಂದ, ಅಧ್ಯಾಪಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕಲ್ಯಾ ಶಾಲೆಯಲ್ಲಿ ಉಚಿತವಾಗಿ ಪುಸ್ತಕ ವಿತರಣೆ














































































