ಮಣಿಪಾಲ : ಶಾಲಾ ಬಸ್ಸೊಂದು ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ಜು. 10ರ ಬೆಳಗ್ಗೆ ನಡೆದಿದೆ.
ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೆಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ರಿವರ್ಸ್ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿತ್ತನ್ನಲಾಗಿದೆ.
ಈ ಬಸ್ಸಿನಲ್ಲಿ ಸುಮಾರು 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಓರ್ವ ಬಾಲಕಿ ತೀವ್ರ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.






































































