ಕಾರ್ಕಳ : ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಅಯ್ಯಪ್ಪ ಮಂದಿರದಲ್ಲಿ ಜು. 10ರಂದು ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತಾ ದಾರೇಕರ್ ಮಾತನಾಡಿ, ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವಿನ ಆರೋಗ್ಯಕರ ಅಂತರ ಕಾಪಾಡುವುದರ ಕುರಿತು ಮಾಹಿತಿ ನೀಡಿದರು.
ಅಜೆಕಾರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹೆನ್ರಿ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಮಾ ಪೂಜಾರಿ ಸ್ವಾಗತಿಸಿ, ವಿದ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ವಂದಿಸಿದರು. ಆರೋಗ್ಯ ಕೇಂದ್ರದ ಸಿಬ್ಬಂದಿ ಅಶ್ವಿನಿ, ಪ್ರತಿಮಾ ಪೂಜಾರಿ, ಚಂದ್ರಕಲಾ ಸಹಕರಿಸಿದರು.
ಅಜೆಕಾರು : ವಿಶ್ವ ಜನಸಂಖ್ಯಾ ದಿನಾಚರಣೆ


































































