ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ, ಮಾಳ-ಕೆರ್ವಾಶೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ಎಸ್. ಮಾಳ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದ ರಾವ್ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರ ಶಿಫಾರಸ್ಸಿನ ಮೇರೆಗೆ ಅನಿಲ್ ಎಸ್. ಪೂಜಾರಿ ಮಾಳ ಅವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಕಾರ್ಕಳ ಬಿಲ್ಲವ ಸಂಘದ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೂರು ಬಾರಿ ಮಾಳ ಗ್ರಾಮ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅನಿಲ್ ಎಸ್. ಪೂಜಾರಿ ಮಾಳ











