ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ – ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನ

ಕಾರ್ಕಳ : ಸುಗಮ, ಸುರಕ್ಷಿತ ಸಂಚಾರ ಉತ್ತೇಜಿಸುವ ನಿಟ್ಟಿನಲ್ಲಿ ನಿಟ್ಟೆ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ ಹಾಗೂ ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರೀಯಲ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಜು. 12ರಂದು ರಸ್ತೆ ಸುರಕ್ಷತಾ ಅಭಿಯಾನ ನಡೆಯಿತು.
ಸುರಕ್ಷಿತ ರಸ್ತೆ – ಸುರಕ್ಷಿತ ಜೀವನ ಹಾಗೂ ನಮ್ಮ ರಸ್ತೆ – ನಮ್ಮ ಜವಾಬ್ದಾರಿ ಧ್ಯೇಯದೊಂದಿಗೆ ಹಮ್ಮಿಕೊಂಡ ಅಭಿಯಾನದಲ್ಲಿ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ದೂಪದಕಟ್ಟೆಯಿಂದ ಹಾಳೆಕಟ್ಟೆವರೆಗಿನ ಸುಮಾರು 5 ಕಿಲೋಮೀಟರ್ ರಸ್ತೆ ಬದಿ ಸ್ವಚ್ಛತಾ ಕಾರ್ಯ, ಫಲಕಗಳ ಸ್ವಚ್ಛತೆ, ಗಿಡಗಂಟಿ ರಸ್ತೆ ಮೇಲ್ಭಾಗವಿದ್ದ ಮಣ್ಣು ತೆರವುಗೊಳಿಸಲಾಯಿತು. ಸೂಚನಾ ಫಲಕ ಪ್ರಯಾಣಿಕರಿಗೆ ಕಾಣುವಂತೆ ಮಾಡಲಾಯಿತು.

ಶಾಸಕರ ಭೇಟಿ
ಶಾಸಕ ವಿ. ಸುನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು. ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಅಧ್ಯಕ್ಷ ಉಪೇಂದ್ರ ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜನೇಶ್ವರ ಆಚಾರ್ಯ, ಶಿರ್ವ ಶಾಖೆಯ ಪ್ರಬಂಧಕ ದಿನೇಶ್ ಆಚಾರ್ಯ, ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ ನಿಟ್ಟೆ ಇದರ ಅಧ್ಯಕ್ಷ ಹರ್ಷವರ್ಧನ್ ನಿಟ್ಟೆ, ಲಕ್ಷ್ಮಣ ಆಚಾರ್ಯ, ಜಯಾನಂದ ಆಚಾರ್ಯ, ಮುರಳೀಧರ ಆಚಾರ್ಯ, ಶ್ರೀಧರ ಆಚಾರ್ಯ ಕೆಮ್ಮಣ್ಣು, ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ನಿಟ್ಟೆ ವಿಶ್ವಕರ್ಮ ಯುವವೇದಿಕೆಯ ಅಧ್ಯಕ್ಷ ಪ್ರದೀಪ್ ಆಚಾರ್ಯ ಪರಪ್ಪಾಡಿ, ಉಪಾಧ್ಯಕ್ಷ ಸುಧೀರ್ ಕಲ್ಯಾ, ಕಾರ್ಯದರ್ಶಿ ಪ್ರದೀಪ್ ಆಚಾರ್ಯ ಕೆಮ್ಮಣ್ಣು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.























error: Content is protected !!
Scroll to Top