ಆಗಸ್ಟ್ 6 ರಿಂದ ಮುಂಗಾರು ಅಧಿವೇಶನ

ಬೆಂಗಳೂರು : ಆಗಸ್ಟ್ 6ರಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 6 ರಿಂದ ವಿಧಾನ ಮಂಡಲ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ಹೊಸದಿಲ್ಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

ಇನ್ನು ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಅವರು ಸುಳಿವು ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಪದೇ ಪದೇ ತಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ನೀಡಿರುವ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಈಗಾಗಲೇ ಅವರು ದೆಹಲಿಗೆ ತೆರಳುವ ಬಗ್ಗೆಯೂ ಮಾಹಿತಿಯನ್ನು ನೀಡಿದ್ದಾರೆ. ರಾಹುಲ್ ಗಾಂಧಿ ದೆಹಲಿಗೆ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆದು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

























error: Content is protected !!
Scroll to Top