ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ : ವಿದ್ಯಾರ್ಥಿಗಳ ಆರೋಗ್ಯ ಮತ್ತು ಸ್ವಚ್ಛ ಜೀವನ ಶೈಲಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಜು. 15ರಂದು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುವ ಡಾ. ಮುರಳಿಕೃಷ್ಣ ಅವರು ವಿದ್ಯಾರ್ಥಿಗಳಿಗೆ ಸ್ವಚ್ಛತೆ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಮಾನಸಿಕ ಆರೋಗ್ಯ ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಉಪನ್ಯಾಸ ನೀಡಿದರು.
ರಾಜೇಶ್ವರಿ ಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಿಯಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

























error: Content is protected !!
Scroll to Top