ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕಳೆದ ಮೂರು ದಿನಗಳಿಂದ ಉಸಿರಾಟದ ಸಮಸ್ಯೆ ಉಲ್ಬಣಿಸಿತ್ತು ಜತೆಗೆ ಎದೆ ಭಾಗದಲ್ಲಿ ನೋವು ಇದ್ದಿದ್ದರಿಂದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನ ಹೊಂದಿದರು.
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ































