ತುಳುವ ಮಹಾಸಭಾ ಇಂಟರ್ನ್ಯಾಷನಲ್ ಜಿಲ್ಲಾಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಯರ್ಲಪಾಡಿ

ಉಡುಪಿ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ ಇದರ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿಯ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ.

ಉದಯ ಕುಮಾರ್ ಹೆಗ್ಡೆ ಅವರು ಯರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕಾರ್ಕಳ ಭೂನ್ಯಾಯ ಮಂಡಳಿ ಸದಸ್ಯರಾಗಿ, ಮೂರು ಅವಧಿಗಳಲ್ಲಿ ನೀರೆ ಬೈಲೂರು ವ್ಯವಸಾಯ ಸೇವಾ ಸಂಘದ ನಿರ್ದೇಶಕರಾಗಿ, ಸ್ವರ್ಣ ಸೌಹಾರ್ದ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಕಾರ್ಕಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾಗಿ, ಬೈಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ನೀರೆ ಬೈಲೂರಿನ ಅಧ್ಯಕ್ಷರಾಗಿ, ಲಯನ್ಸ್ ಜಿಲ್ಲೆ 317Cಯ ವಲಯಾಧ್ಯಕ್ಷರಾಗಿ, ಪ್ರಾಂತೀಯ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಸಂಪುಟ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ,ಕರ್ವಾಲು ಹಾಗೂ ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಮೂಡಬಿದಿರೆ ಬ್ರಹ್ಮಕಲಶೋತ್ಸವ ಸಮಿತಿಗಳ ಅಧ್ಯಕ್ಷರಾಗಿ, ಆಡಳಿತ ಮೊಕ್ತೇಸರರಾಗಿ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷರಾಗಿ, ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ ಯರ್ಲಪಾಡಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ, ಬೈಲೂರು ಶ್ರೀ ರಾಮ ಮಂದಿರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಮೈತ್ರಿ ಸೇವಾ ಸಂಘ, ಪೃಥ್ವಿ ಯುವಕ ಮಂಡಲ, ಪಂಚಾಯತ್‌ರಾಜ್ ಒಕ್ಕೂಟ ಕಾರ್ಕಳ ತಾಲೂಕು, ಕಾರ್ಕಳ ತಾಲೂಕು ಲಾರಿ ಚಾಲಕರು ಮತ್ತು ಮಾಲಕರ ಸಂಘ ಸೇರಿದಂತೆ ಹತ್ತು ಹಲವು ಸಂಘ-ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಉದಯ ಕುಮಾರ್ ಹೆಗ್ಡೆ ಅವರ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಹಕಾರ ಹಾಗೂ ಸಾರ್ವಜನಿಕ ಜೀವನದಲ್ಲಿನ ಕಾರ್ಯವೈಖರಿಯನ್ನ ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕರ್ನಾಟಕ ರಾಜ್ಯಾಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಹಾಗೂ ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ, ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಾಡ ಅವರು ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.





























error: Content is protected !!
Scroll to Top