ಕ್ರೈಸ್ಟ್‌ಕಿಂಗ್‌ : ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರ ಕೀರ್ತನ್, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಏಕಾಗ್ರತೆ ಮತ್ತು ಬದ್ಧತೆಯಿಂದ ಸತತ ಪ್ರಯತ್ನಪಟ್ಟಾಗ ಯಶಸ್ಸು ಖಚಿತ. ನಮ್ಮಲ್ಲಿ ಅತ್ಯುತ್ತಮ ಕೌಶಲ್ಯಗಳಿದ್ದಾಗ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಸಾಧನೆಯ ದಾರಿಯಲ್ಲಿ ಸಾಗುವಾಗ ಎದುರಾಗುವ ಸೋಲುಗಳಿಗೆ ಅಳುಕದೆ ಮುಂದುವರಿಯಬೇಕು ಎಂದು ಹೇಳಿದರು.
ಸಂಸ್ಥೆಯ ಉಪಪ್ರಾಚಾರ್ಯ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಪ್ರಕಾಶ್ ಭಟ್ ವೇದಿಕೆಯಲ್ಲಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಯೋಲಾ ಸ್ಟ್ಯಾನಿ, ಕೀರ್ತನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.















































































error: Content is protected !!
Scroll to Top