ಪೆರ್ವಾಜೆ ಶಿರ್ಡಿ ಸಾಯಿ ಬಾಬಾ ಮಂದಿರ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ ನಿಧನ

ಕಾರ್ಕಳ : ಪೆರ್ವಾಜೆಯ ಶಿರ್ಡಿ ಸಾಯಿ ಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ (62) ಜು.21ರ ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಪೆರ್ವಾಜೆಯ ಅಂಗಡಿ ಭಟ್ರು ಎಂದು ಕರೆಸಿಕೊಳ್ಳುತ್ತಿದ್ದ ಅವರು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಕಾರ್ಕಳದ ಅನೇಕ ದೇವಸ್ಥಾನಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
11:30ಕ್ಕೆ ಸ್ವಗೃಹದಲ್ಲಿ ಅವರ ಅಂತಿಮ ವಿಧಿ ವಿಧಾನ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.





























































































































error: Content is protected !!
Scroll to Top