ಮಳೆ ಹಿನ್ನೆಲೆ – ಜು. 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 25ರಂದು ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಹವಾಮಾನ ಇಲಾಖೆಯ ಆರೆಂಜ್‌ ಅಲರ್ಟ್‌ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಲಿರುವುದರಿಂದ ಜು. 25ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ರಜೆ ಘೋಷಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನೀಯರಿಂಗ್‌ ತರಗತಿಗಳಿಗೆ ರಜೆ ಇರುವುದಿಲ್ಲ.

















































error: Content is protected !!
Scroll to Top