ಕಾರ್ಕಳ : ಡಾ. ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ ನಿಟ್ಟೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ
ಇದರ ಸಂಯುಕ್ತ ಆಶ್ರಯದಲ್ಲಿ ಜು. 18ರಂದು ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ ಹಾಗೂ ಸಂಭ್ರಮ ಶನಿವಾರ (ಬ್ಯಾಗ್ ರಹಿತ ದಿನ) ಕಾರ್ಯಕ್ರಮ ನಡೆಯಿತು.
ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ರಸ್ತೆ ಸಂಚಾರಿ ನಿಯಮ ಹಾಗೂ ಪೋಕ್ಸೋ ಕಾಯಿದೆ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ರುದ್ರೇಶ್, ಶಾಲಾ ಸಂಸತ್ತಿನ ನಾಯಕಿ ಯಶಸ್ವಿ ವೈ. ಆಚಾರ್ಯ, ಉಪನಾಯಕ ವಿಜೇಶ್ ಆಚಾರ್ಯ ಉಪಸ್ಥಿತರಿದ್ದರು. ದೀಕ್ಷಾ ದೇವಾಡಿಗ ಹಾಗೂ ತಂಡದವರು ಪ್ರಾರ್ಥಿಸಿದರು. ಹಿರಿಯ ಶಿಕ್ಷಕ ಚಂದ್ರ ನಾಯ್ಕ್ ಟಿ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಣ ಮಂತ್ರಿ ಖ್ಯಾತಿ ವಂದಿಸಿದರು.
ನಿಟ್ಟೆ ಡಾ. ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ – ಮಾದಕ ದ್ರವ್ಯ ಜಾಗೃತಿ ಅಭಿಯಾನ















