26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಮ್‌ ವಾಂಗ್ಚುಕ್‌

ಕೇಂದ್ರ ಸರಕಾರದ ಭರವಸೆ ಬೆನ್ನಲ್ಲೆ ಸೋನಮ್ ವಿಡಿಯೋ ಸಂದೇಶ ಬಿಡುಗಡೆ

ದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮಕ್ಕೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಶುಕ್ರವಾರ ಅಂತ್ಯಗೊಳಿಸಿದ್ದಾರೆ.

ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿದೆ.
ಗುರುವಾರ ಮಧ್ಯರಾತ್ರಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಡಾ. ಜಿತೇಂದ್ರ ಸಿಂಗ್ ಅವರು ಸೋನಮ್ ವಾಂಗ್ಚುಕ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಸರ್ಕಾರದ ಪರವಾಗಿ ಹಲವು ಭರವಸೆಗಳನ್ನು ನೀಡಿದರು.
ಉಪವಾಸ ಅಂತ್ಯಗೊಳಿಸಿದ ಬಳಿಕ ಎಕ್ಸ್ ನಲ್ಲಿ ಪೋಸ್ಟ್‌ ಹಂಚಿಕೊಂಡ ವಾಂಗ್ಚುಕ್, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಡಾ. ಜಿತೇಂದ್ರ ಸಿಂಗ್, ಲಡಾಖ್ ಅಪೆಕ್ಸ್ ಬಾಡಿಯ ಹಿರಿಯ ನಾಯಕರ ಸಮ್ಮುಖದಲ್ಲಿ ನಾನು 26 ದಿನಗಳ ಉಪವಾಸವನ್ನು ಅಂತ್ಯಗೊಳಿಸಿದ್ದೇನೆ. ಹಲವು ಷರತ್ತುಗಳ ಕುರಿತು ದೀರ್ಘ ಮಾತುಕತೆ ನಡೆದಿದ್ದು, ದೇಶದಲ್ಲಿ ಯಾವುದೇ ರೀತಿಯ ಹಿಂಸಾಚಾರ ನಡೆಯದಂತೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಭರವಸೆ ಬೆನ್ನಲ್ಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೊನಮ್‌ ವಾಂಗ್ಚುಕ್‌ ಬಳಿಕ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ‘ಇದು ಉಪವಾಸದ ಅಂತ್ಯವಾಗಿರಬಹುದು. ಆದರೆ, ಸರಕಾರ ಮತ್ತು ಅಧಿಕಾರಿಗಳ ಹೊಣೆಗಾರಿಕೆಯ ನಿಜವಾದ ಆರಂಭ. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹೊಣೆಗಾರಿಕೆ ಕುರಿತು ಚರ್ಚಿಸಲು ಮತ್ತು ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಸರಕಾರ ಭರವಸೆ ನೀಡಿದೆ ಎಂದು ತಿಳಿಸಿದ್ದು, ನನ್ನ ಉಪವಾಸ ಅಂತ್ಯವಾಗಿದ್ದಕ್ಕೆ ಸಂತಸವಿದೆ. ನನಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

































error: Content is protected !!
Scroll to Top