ಕಾರ್ಕಳ : ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮದ ಕೂಡ್ಲು ಬೀರನ್‌ಬೈಲು ಸೇತುವೆ ಹಾಗೂ ಮರ್ಣೆ ಪಂಚಾಯತ್ ವ್ಯಾಪ್ತಿಯ ಹೆರ್ಮುಂಡೆ ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ 5 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕೂಡ್ಲು ಬೀರನ್‌ಬೈಲು ಸೇತುವೆ ನಿರ್ಮಾಣಕ್ಕೆ 3 ಕೋಟಿ ರೂ., ಹೆರ್ಮುಂಡೆ ಸೇತುವೆ ನಿರ್ಮಾಣಕ್ಕೆ 2 ಕೋಟಿ ರೂ. ಬಿಡುಗಡೆಗೊಂಡಿದೆ. ಈ ಎರಡೂ ಸೇತುವೆಗಳು ಜನರ ಬಹುದಿನಗಳ ಬೇಡಿಕೆಯಾಗಿದ್ದು, ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರಕಾರ ಹಾಗೂ ಇಲಾಖಾ ಸಚಿವರಿಗೆ ಮನವಿ ಮಾಡಲಾಗಿತ್ತು. ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















