ಕಾರ್ಕಳ : ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಜು. 26ರಂದು ಬೆಳಿಗ್ಗೆ 8.30ರಿಂದ ಕುಕ್ಕುಂದೂರಿನ ಕೊಡಿಯಾಲ್‌ನಲ್ಲಿ ಕೆಸರಾಟ ಪಾಠ ನಡೆಯಲಿದೆ.
ಶಾಸಕ ವಿ.ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹಮ್ಮದ್ ಸದಾಕತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಉದ್ಯಮಿ ವಿಜಯ ಶೆಟ್ಟಿ, ವಕೀಲ ಮಣಿರಾಜ ಶೆಟ್ಟಿ, ಉದ್ಯಮಿ ನವೀನ್ ನಾಯಕ್, ನ್ಯೂಸ್ ಕಾರ್ಕಳ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಬರೆಪ್ಪಾಡಿ, ಕುಕ್ಕುಂದೂರು ಗ್ರಾ. ಪಂ. ಮಾಜಿ ಸದಸ್ಯ ರವಿ ಕುಮಾರ್ ಶೆಟ್ಟಿ, ಉದ್ಯಮಿಗಳಾದ ರಾಜೇಶ್ ರಾವ್, ನಿರಂಜನ್ ಜೈನ್, ಜಿ. ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅವಿನಾಶ್ ಶೆಟ್ಟಿ, ವಾಣಿಜ್ಯ ವಿಭಾಗ ಡೀನ್ ಪ್ರಶಾಂತ್ ಎಮ್. ಡಿ., ಕಲಾ ವಿಭಾಗ ಡೀನ್ ವೇಣುಗೋಪಾಲ್ ಶೆಟ್ಟಿ, ಸಂಸ್ಕೃತ ವಿಭಾಗ ಮುಖ್ಯಸ್ಥ ಅಂಬರೀಷ ಚಿಪಳೂಣಕರ ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















