ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರ್ಕಳ : ಕೃಷಿ ಇಲಾಖೆಯ ವತಿಯಿಂದ ಕೃಷಿವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಕನಿಷ್ಠ 1 ಎಕ್ರೆ ಕೃಷಿ ಭೂಮಿ ಹೊಂದಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಆಗಸ್ಟ್‌ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕಾರ್ಕಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಪ್ರಕಟನೆ ತಿಳಿಸಿದೆ.

































error: Content is protected !!
Scroll to Top