ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು : ವಾಂಗ್ಚುಕ್‌

ದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಹೋರಾಟವನ್ನು ಬಣ್ಣಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಜೂನ್ 28 ರಂದು ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಹಿಂತೆಗೆದುಕೊಳ್ಳುವುದು ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ಅವರು ಗುರುವಾರ ರಾತ್ರಿ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು.

ಸದ್ಯ ವಾಂಗ್ಚುಕ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟದ ಫಲವಾಗಿ ಕೇಂದ್ರ ಸಚಿವರ ರಾಜೀನಾಮೆ ಬೆನ್ನಲ್ಲೇ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಆಸ್ಪತ್ರೆಯ ಬೆಡ್‌ ಮೇಲಿರುವ ವಾಂಗ್ಚುಕ್‌ ವಿಕ್ಟರಿ ಚಿಹ್ನೆಯನ್ನು ತೋರಿಸುವ ಮೂಲಕ ವಿಜಯೋತ್ಸವ ಸಂದೇಶ ಹಂಚಿಕೊಂಡಿದ್ದಾರೆ.

ಇದು ಪ್ರಜಾಪ್ರಭುತ್ವದ ಗೆಲುವು. ಬೀದಿಗಳಿಂದ ನೇರವಾಗಿ ಪ್ರಜಾಪ್ರಭುತ್ವ. ಶಾಂತಿ, ತಾಳ್ಮೆ ಮತ್ತು ಪರಿಶ್ರಮದ ಗೆಲುವು ಎಂದು ವಾಂಗ್ಚುಕ್‌ ತಿಳಿಸಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ದೇಶದ ಸಿಜೆಪಿ, ಝೆನ್‌-ಜಿ ಹೋರಾಟಗಾರರಿಗೂ ಅಭಿನಂದನೆ ತಿಳಿಸಿದ್ದಾರೆ. ಭಯ ಬಿಟ್ಟು ದೇಶದ ಪ್ರತಿಯೊಂದು ಮೂಲೆಯಲ್ಲೂ ಹೋರಾಟ ನಡೆಸಿದ ನಾಗರಿಕರಿಗೂ ವಾಂಗ್ಚುಕ್‌ ಧನ್ಯವಾದ ಅರ್ಪಿಸಿದ್ದಾರೆ.































































error: Content is protected !!
Scroll to Top