ಬೆಳ್ಮಣ್‌ನಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕಾರ್ಕಳ : ಲಯನ್ಸ್ ಕ್ಲಬ್ ಬೆಳ್ಮಣ್‌ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜು.26ರಂದು ಬೆಳ್ಮಣ್ ಬಸ್ ನಿಲ್ದಾಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು. ಎನ್. ಎಂ. ಹೆಗಡೆ ಅವರು ಕಾರ್ಗಿಲ್ ವಿಜಯೋತ್ಸವದ ಮಹತ್ವ, ಭಾರತೀಯ ಯೋಧರ ಶೌರ್ಯ, ತ್ಯಾಗ ಹಾಗೂ ದೇಶಭಕ್ತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಬಳಿಕ ಯೋಧರನ್ನು ಸ್ಮರಿಸಿ ಅವರಿಗೆ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ. ಹೆಚ್. ಶಿವರಾಮ ಆಚಾರ್ಯ ಹಾಗೂ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

















































error: Content is protected !!
Scroll to Top