ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

ಮಂಡ್ಯ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್‌ ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.

ಈ ವೇಳೆ ಅಭಿಮಾನಿಗಳು ಮುಂದಿನ 10 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇರುವಂತೆ ಮನವಿ ಮಾಡಿದ್ದಾರೆ. ಆದರೂ 2028ರ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ 2028ಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮೇ 28 ರಂದು ರಾಜೀನಾಮೆ ಸಲ್ಲಿಸಿದ್ದರು. ಈ ಮೂಲಕ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿತ್ತು. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿಯವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣದ ಮಹತ್ವದ ಹಂತವೊಂದಕ್ಕೆ ಭಾವುಕ ತೆರೆ ಎಳೆದಿದ್ದರು.

































error: Content is protected !!
Scroll to Top