ಕಾರ್ಕಳ : ಅತ್ತೂರು ದೂಪದಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುವ 2026ರ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಜು.27ರಂದು ಇಂದು ದೂಪದಕಟ್ಟೆಯ ಪದ್ಮ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು.
ಸಾಣೂರು ರಾಜೇಶ್ವರಿ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮತ್ತು ಎನ್‌ಎಂಎಎಂಐಟಿ ನಿಟ್ಟೆ ಪ್ರೊಫೆಸರ್ ಡಾ. ಸುರೇಂದ್ರ ಶೆಟ್ಟಿ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿದರು.
ಗಣೇಶೋತ್ಸವ ಸಮಿತಿ ಅಧ್ಯಕ್ಷ ಅರುಣ್ ಸೇನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಗುರುರಾಜ್ ಭಟ್, ಸದಾನಂದ ಶೆಟ್ಟಿ, ರಾಜೇಶ್ ಸಾಲ್ಯಾನ್, ಸತೀಶ್ ರಾವ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ನಿತಿನ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿ, ಅರ್ಜುನ್ ಕುಮಾರ್ ವಂದಿಸಿದರು.







































