ಸಿವಿಲ್ ಪೊಲೀಸ್ ನೇಮಕಾತಿ – ಕ.ಕಲ್ಯಾಣ ಅಭ್ಯರ್ಥಿಗಳ ಪರೀಕ್ಷಾ ಸಮಯದಲ್ಲಿ ಬದಲು

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಆ.2ರಂದು ನಡೆಯುವ ಲಿಖಿತ ಪರೀಕ್ಷೆಯ ಸಮಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬದಲಾವಣೆ ಮಾಡಿದೆ.

ಈ ಮೊದಲು ನಿರ್ಧರಿಸಿದಂತೆ ಮಧ್ಯಾಹ್ನ 2:30ರ ಬದಲಿಗೆ ಸಂಜೆ 4 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಕೆಲ ಅಭ್ಯರ್ಥಿಗಳ ಮಧ್ಯಾಹ್ನದ ಪರೀಕ್ಷಾ ಕೇಂದ್ರಗಳು ಬೆಳಗಿನ ಪರೀಕ್ಷಾ ಕೇಂದ್ರದಿಂದ ದೂರ ಇದ್ದು ತೆರಳುವುದಕ್ಕೆ ಕಷ್ಟ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಸಮಯ ಬದಲಾವಣೆ ಮಾಡಿದ್ದು, ಸಂಜೆ 4ರಿಂದ 5.30ರವರೆಗೆ ಪರೀಕ್ಷೆ ನಡೆಯಲಿದೆ. ಉಳಿದಂತೆ ಬೆಳಗಿನ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ವಿವರಿಸಿದ್ದಾರೆ.























error: Content is protected !!
Scroll to Top