ಕಾರ್ಕಳ : ಗುರುವಿನಲ್ಲಿ ಆತ್ಮವಿಶ್ವಾಸ, ತಾಳ್ಮೆ, ವಿನಯತೆಯಿರುವುದು ಮುಖ್ಯ. ಅಂತಹ ಗುಣ ಹೊಂದಿರುವವರು ಶ್ರೇಷ್ಠ ಗುರುವಾಗಿ ಗುರುತಿಸಿಕೊಳ್ಳುತ್ತಾನೆ ಎಂದು ಕಾರ್ಕಳ ಶ್ರೀಮಧ್ಬುವನೇಂದ್ರ ಪ್ರೌಢಶಾಲೆಯ ಮುಖ್ಯಶಿಕ್ಷಕ ಆರ್. ನಾರಾಯಣ ಶೆಣೈ ಅಭಿಪ್ರಾಯಪಟ್ಟರು.
ಅವರು ಜು. 29ರಂದು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ನಡೆದ ಗುರು ಪೂರ್ಣಿಮೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವ್ಯಾಸ ಮಹರ್ಷಿಗಳು ವೇದಗಳನ್ನು ವಿಭಾಗಗಳನ್ನಾಗಿ ಮಾಡಿ ಕೇವಲ ಶಿಷ್ಯರಿಗೆ ಮಾತ್ರವಲ್ಲದೇ ಎಲ್ಲರಿಗೂ ವೇದಾಭ್ಯಾಸವನ್ನು ಸುಲಭವಾಗಿಸಿದರು. ಅಂತಹ ಶ್ರೇಷ್ಠ ಗುರುಗಳ ಜನ್ಮದಿನವನ್ನು ಗುರುಪೂರ್ಣಿಮೆಯೆಂದು ಆಚರಿಸುತ್ತಿರುವುದು ಅತ್ಯಂತ ಅರ್ಥಪೂರ್ಣವೆಂದರು.
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಶಿಕ್ಷಕರಾದ ಪ್ರಿಯಾ, ವೈಶಾಲಿ ಲಕ್ಷ್ಮಣ ಮೊಯ್ಲಿ, ವಿದ್ಯಾರ್ಥಿನಿ ಅವನಿ ಪೈ ಗುರುವಿನ ಮಹತ್ವದ ಬಗ್ಗೆ ಮಾತನಾಡಿದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಪ್ರಾಂಶುಪಾಲೆಯಾಗಿರುವ ವಾಣಿ ಕೆ., ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾಗಿರುವ ಸಾಹಿತ್ಯ, ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತನ್ವಿ ಪ್ರಾರ್ಥಿಸಿ, ವಿದ್ಯಾ ಸ್ವಾಗತಿಸಿದರು. ಶಿಕ್ಷಕಿಯರಾದ ಅನಿಶಾ ನಿರೂಪಿಸಿ, ಸುಪ್ರಿಯಾ ವಂದಿಸಿದರು.
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ











