ಶಟಲ್‌ ಬ್ಯಾಡ್ಮಿಂಟನ್‌ – ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ : ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನಡೆದ 14ರ ವಯೋಮಿತಿಯೊಳಗಿನ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಜಿ.ಡಿ. ತ್ರಿಭುವನ್ ಮತ್ತು ಪೀಹು ಪಿ. ಮೆಂಡನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಜಿ. ಡಿ. ತ್ರಿಭುವನ್ ಅವರು ಕಾರ್ಕಳದ ಜಿ.ಡಿ. ದಿನೇಶ್ ಹಾಗೂ ಎ.ಪಿ. ವನಿತಾ ಅವರ ಪುತ್ರನಾಗಿದ್ದು, ಪೀಹು ಪಿ. ಮೆಂಡನ್ ಇವರು ಮಲ್ಪೆಯ ಪುರಂದರ್ ಮೆಂಡನ್ ಹಾಗೂ ಜ್ಯೋತಿ ದಂಪತಿ ಪುತ್ರಿ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.





























































































































error: Content is protected !!
Scroll to Top