ಕಾರ್ಕಳ : ಮಣಿಪಾಲ ವಿದ್ಯಾನಗರ ಜ್ಞಾನಸುಧಾ ಆಂಗ್ಲ ಮಾಧ್ಯಮ ಫ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ಆಚರಿಸಲಾಯಿತು. ಹಿರಿಯಡ್ಕದ ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಂ.ಆರ್. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪುರಾಣ ಕಾಲದಿಂದಲೂ ಗುರುವಿಗೆ ಉನ್ನತ ಸ್ಥಾನವನ್ನು ನೀಡಿ ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳ ಬದುಕು ಬೆಳಗಿಸುವ ಕಾರ‍್ಯದಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಗುರುಗಳನ್ನು ನಾವು ಗೌರವಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಅತಿಥಿಗಳಿಗೆ ಪಾದಪೂಜೆ ನೆರವೇರಿಸಿ ಗುರು ವಂದನೆ ಸಲ್ಲಿಸಲಾಯಿತು.
ಮಣಿಪಾಲ ಜ್ಞಾನಸುಧಾ ಆಂಗ್ಲಮಾಧ್ಯಮ ಫ್ರೌಢಶಾಲೆಯ ಉಪಪ್ರಾಂಶುಪಾಲ ನವೀನ್, ಜೆ.ಇ.ಇ/ನೀಟ್ ಫೌಂಡೇಶನ್ ಸ್ಟ್ಯೂಡೆಂಟ್ ಕೋಆರ್ಡಿನೇಟರ್ ಶಮಿತಾ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಮಂಜುಳ ಕಾರ್ಯಕ್ರಮ ನಿರೂಪಿಸಿದರು.
ಮಣಿಪಾಲ ಜ್ಞಾನಸುಧಾದಲ್ಲಿ ಗುರುಪೂರ್ಣಿಮೆ


























